¶ ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,
TSK
TSK · ಅಪೊಸ್ತಲರ ಕೃತ್ಯಗ 10:1
مراجع Treasury of Scripture Knowledge في ಕನ್ನಡ IRV.
¶ ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು.
ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.
ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.
ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.
¶ ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.
ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.