TSK

TSK · ಅಪೊಸ್ತಲರ ಕೃತ್ಯಗ 10:33

مراجع Treasury of Scripture Knowledge في ಕನ್ನಡ IRV.

العودة إلى المقطع

ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.

ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.

ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.

‹ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.›

‹ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ”› ಎಂದು ಹೇಳಿದನು.

¶ “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.

ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.

¶ ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.

¶ ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.