TSK

TSK · ಅಪೊಸ್ತಲರ ಕೃತ್ಯಗ 10:4

مراجع Treasury of Scripture Knowledge في ಕನ್ನಡ IRV.

العودة إلى المقطع

ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮದ ಮಹತ್ವವನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಹೆಸರಿನಲ್ಲಿ ಈ ಆಲಯವು ಕಟ್ಟಲ್ಪಟಿದ್ದೆಯೆಂದು ತಿಳಿದುಕೊಳ್ಳುವರು.

ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.

ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.

ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.

ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು.

ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?

ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.

ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.

ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.