ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.
TSK
TSK · ಅಪೊಸ್ತಲರ ಕೃತ್ಯಗ 11:21
مراجع Treasury of Scripture Knowledge في ಕನ್ನಡ IRV.
ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.
ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?
ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು.
ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.
¶ ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.
ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು.
‹ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’› ಅಂದನು.
ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.