ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
TSK
TSK · ಅಪೊಸ್ತಲರ ಕೃತ್ಯಗ 11:24
مراجع Treasury of Scripture Knowledge في ಕನ್ನಡ IRV.
ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.
ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.
ಆತನು ಅವನಿಗೆ, ‹“ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ.›‹ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ”› ಎಂದು ಹೇಳಿದನು.
ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.
ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.
¶ ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.
ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.
ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.