¶ ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಅನಂತರ ಜೀಫ್ ಅರಣ್ಯದ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ಪ್ರತಿದಿನ ಅವನನ್ನು ಹುಡುಕುತ್ತಿದ್ದರೂ ದೇವರು ಅವನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.
TSK
TSK · ಅಪೊಸ್ತಲರ ಕೃತ್ಯಗ 12:19
مراجع Treasury of Scripture Knowledge في ಕನ್ನಡ IRV.
¶ ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.
ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.
¶ ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು.
¶ ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.
ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
¶ ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.
ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.
ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.