TSK

TSK · ಅಪೊಸ್ತಲರ ಕೃತ್ಯಗ 13:11

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.

ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.

¶ ಅರಾಮ್ಯರ ಅರಸನು ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ತನ್ನ ಸೇನಾಧಿಪತಿಗಳಿಗೆ, “ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ಗೊತ್ತುಮಾಡಬೇಕು” ಎಂದನು.

ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ

ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.

¶ ಆಗ ಯೇಸುವು, ‹“ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು”› ಎಂದನು.

ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.

¶ ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.

ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.