ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
TSK
TSK · ಅಪೊಸ್ತಲರ ಕೃತ್ಯಗ 13:17
مراجع Treasury of Scripture Knowledge في ಕನ್ನಡ IRV.
¶ ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.
ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.
ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.
ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.
¶ ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.
ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.
ಯೆಹೋವನೇ, ಅಬ್ರಾಮನನ್ನು ಆರಿಸಿಕೊಂಡು ಕಸ್ದೀಯರ ಊರ್ ಎಂಬ ಪಟ್ಟಣದಿಂದ ಬರಮಾಡಿ, ಅವನಿಗೆ ಅಬ್ರಹಾಮನೆಂಬ ಹೆಸರನ್ನು ಕೊಟ್ಟ ದೇವರು ನೀನೇ.
ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.
ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ.
ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ, ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.
ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.
ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.
ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು:
ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.
ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.
ನೀನು ಐಗುಪ್ತದೇಶದೊಳಗಿಂದ ಪಾರಾಗಿ ಬಂದ ಕಾಲದಲ್ಲಿ ನಾನು ತೋರಿಸಿದಂತೆ ಅದ್ಭುತಗಳನ್ನು ತೋರಿಸುವೆನು.
¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.