TSK

TSK · ಅಪೊಸ್ತಲರ ಕೃತ್ಯಗ 13:21

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.

ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟುಬಿದ್ದಿತು. ಆದರೆ ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ.

ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.