TSK

TSK · ಅಪೊಸ್ತಲರ ಕೃತ್ಯಗ 13:34

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.

ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.

ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.

ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”

¶ “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.

¶ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.