ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
TSK
TSK · ಅಪೊಸ್ತಲರ ಕೃತ್ಯಗ 14:3
مراجع Treasury of Scripture Knowledge في ಕನ್ನಡ IRV.
¶ “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
¶ ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.
ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.
ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.
ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.
ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು;
ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.