TSK

TSK · ಅಪೊಸ್ತಲರ ಕೃತ್ಯಗ 15:19

مراجع Treasury of Scripture Knowledge في ಕನ್ನಡ IRV.

العودة إلى المقطع

ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.

¶ “ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,

ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.

ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.

ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ