TSK

TSK · ಅಪೊಸ್ತಲರ ಕೃತ್ಯಗ 15:33

مراجع Treasury of Scripture Knowledge في ಕನ್ನಡ IRV.

العودة إلى المقطع

ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು.

ಆತನು ಆಕೆಗೆ, ‹“ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ”› ಎಂದು ಹೇಳಿದನು.

ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.

ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.