TSK

TSK · ಅಪೊಸ್ತಲರ ಕೃತ್ಯಗ 16:28

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.

ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.

ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು.

‹ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ;›‹ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.›

‹ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.›

ಆಗ ಯೇಸು, ‹“ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು”› ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.