TSK

TSK · ಅಪೊಸ್ತಲರ ಕೃತ್ಯಗ 17:11

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.

ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ.

ನಿನ್ನ ನುಡಿಯನ್ನು ಧ್ಯಾನಿಸಲು, ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ.

ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,

ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.

ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು.

‹ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ”› ಎಂದು ಹೇಳಿದನು.

¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.

‹ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”›

ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.

¶ ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.

ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.

ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.

ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.

ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.

ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.