TSK

TSK · ಅಪೊಸ್ತಲರ ಕೃತ್ಯಗ 17:31

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.

‹ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

ಅನಂತರ, ‹“ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,›

ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.

ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.

ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.

ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.

ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.

ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;

¶ ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,

¶ ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,