TSK

TSK · ಅಪೊಸ್ತಲರ ಕೃತ್ಯಗ 17:32

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”

‹ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.›

ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.

ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.

ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.

ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.

ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?

ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.

“ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.

ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.