TSK

TSK · ಅಪೊಸ್ತಲರ ಕೃತ್ಯಗ 17:7

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.

“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.

ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ” ಅಂದರು.

ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.