ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
TSK
TSK · ಅಪೊಸ್ತಲರ ಕೃತ್ಯಗ 19:13
مراجع Treasury of Scripture Knowledge في ಕನ್ನಡ IRV.
¶ ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.
ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.
ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.
¶ ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
‹ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.›