¶ ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,
TSK
TSK · ಅಪೊಸ್ತಲರ ಕೃತ್ಯಗ 19:21
مراجع Treasury of Scripture Knowledge في ಕನ್ನಡ IRV.
“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,
ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.
¶ ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಬರಮಾಡಿಕೊಂಡರು.
¶ “ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.
¶ ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.
¶ ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.
¶ ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.
ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಸ್ಥಳವಿಲ್ಲದ್ದರಿಂದಲೂ ನಿಮ್ಮ ಬಳಿಗೆ ಬರುವುದಕ್ಕೆ ಅನೇಕ ವರ್ಷಗಳಿಂದ ಆಸಕ್ತಿ ಇದ್ದುದರಿಂದಲೂ
¶ ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು ಎರಡನೆಯ ಸಾರಿ ಕೃಪಾರ್ಶೀವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು.
¶ ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.