ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.
TSK
TSK · ಅಪೊಸ್ತಲರ ಕೃತ್ಯಗ 19:29
مراجع Treasury of Scripture Knowledge في ಕನ್ನಡ IRV.
ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.
ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.
¶ ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.
ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.
ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ.
ಇದು ಮಾತ್ರವಲ್ಲದೆ, ಕರ್ತನ ಮಹಿಮೆಗಾಗಿ ಮತ್ತು ನಮ್ಮ ಸಿದ್ಧ ಮನಸ್ಸನ್ನು ತೋರಿಸುವುದಕ್ಕಾಗಿ ನಾವು ನಡಿಸುವ ಧರ್ಮಕಾರ್ಯದ ಸಂಬಂಧವಾಗಿ ನಮ್ಮ ಸಂಗಡ ಪ್ರಯಾಣಮಾಡುವಂತೆ ಸಭೆಗಳಿಂದ ಇವನು ಆರಿಸಲ್ಪಟ್ಟಿದ್ದಾನೆ.
ನನ್ನ ಜೊತೆಗೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ, ಲೂಕ ಇವರೆಲ್ಲರೂ ನಿನಗೆ ವಂದನೆ ತಿಳಿಸಿದ್ದಾರೆ.