TSK

TSK · ಅಪೊಸ್ತಲರ ಕೃತ್ಯಗ 19:34

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.

ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;

¶ ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.

ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.