ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.
TSK
TSK · ಅಪೊಸ್ತಲರ ಕೃತ್ಯಗ 19:8
مراجع Treasury of Scripture Knowledge في ಕನ್ನಡ IRV.
ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.
¶ ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.
ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
¶ ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.