TSK

TSK · ಅಪೊಸ್ತಲರ ಕೃತ್ಯಗ 20:26

مراجع Treasury of Scripture Knowledge في ಕನ್ನಡ IRV.

العودة إلى المقطع

ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.

“ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.

ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.

ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.

¶ ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ.

ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.