ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.
TSK
TSK · ಅಪೊಸ್ತಲರ ಕೃತ್ಯಗ 20:7
مراجع Treasury of Scripture Knowledge في ಕನ್ನಡ IRV.
¶ ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, ‹“ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ”› ಅಂದನು.
¶ ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.
ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ ‹“ಸಮಾಧಾನವಾಗಲಿ ಎಂದನು”›
ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.
¶ ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
¶ ನಾನು ಇನ್ನು ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ಯಾಕೆಂದರೆ ನೀವು ಒಟ್ಟಾಗಿ ಸೇರಿಬರುತ್ತಿರುವುದು ಕೇಡಿಗಾಗಿಯೇ ಹೊರತು ಮೇಲಿಗಾಗಿಯಲ್ಲ.
ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.
ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.