TSK

TSK · ಅಪೊಸ್ತಲರ ಕೃತ್ಯಗ 21:16

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.

¶ ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.

¶ ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.

ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.

ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.

ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.