TSK

TSK · ಅಪೊಸ್ತಲರ ಕೃತ್ಯಗ 21:40

مراجع Treasury of Scripture Knowledge في ಕನ್ನಡ IRV.

العودة إلى المقطع

ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.

ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.

¶ ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.

¶ ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.

ಪೌಲನು ಮೆಟ್ಟಿಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.

ನಾವೆಲ್ಲರು ನೆಲಕ್ಕೆ ಬೀಳಲು; ‹‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ?› ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.

¶ ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.