TSK

TSK · ಅಪೊಸ್ತಲರ ಕೃತ್ಯಗ 26:10

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.

ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.

ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.

¶ ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.

ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.

¶ “ಅದಕ್ಕೆ ನಾನು; ‘ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ, ನಿನ್ನ ಮೇಲೆ ನಂಬಿಕೆಯಿಟ್ಟವರನ್ನು, ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು,

ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.

¶ ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,