TSK

TSK · ಅಪೊಸ್ತಲರ ಕೃತ್ಯಗ 27:5

مراجع Treasury of Scripture Knowledge في ಕನ್ನಡ IRV.

العودة إلى المقطع

ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ

¶ ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.

ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.

¶ ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.