ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು” ಎಂದು ಕೇಳಿದನು.
TSK
TSK · ಅಪೊಸ್ತಲರ ಕೃತ್ಯಗ 28:20
مراجع Treasury of Scripture Knowledge في ಕನ್ನಡ IRV.
¶ ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;
ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.
ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು.
¶ ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.
ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.
ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
ನಾನು ಸುವಾರ್ತೆಯ ನಿಮಿತ್ತ ಸೆರೆಮನೆಯಲ್ಲಿರುವಾಗ ನನಗೆ ಉಪಚಾರಮಾಡುವಂತೆ ನಿನಗೆ ಬದಲಾಗಿ ಅವನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಬೇಕೆಂದು ಆಲೋಚಿಸಿದ್ದೆನು.