TSK

TSK · ಅಪೊಸ್ತಲರ ಕೃತ್ಯಗ 28:23

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.

ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.

ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.

¶ ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.

ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.

ಮತ್ತು ಸಹೋದರಿಯಾದ ಅಪ್ಫಿಯಳಿಗೂ, ನಮ್ಮ ಸಹ ಹೋರಾಟಗಾರನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ: