ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?” ಎಂದು ಕೇಳಿದನು.
TSK
TSK · ಅಪೊಸ್ತಲರ ಕೃತ್ಯಗ 28:8
مراجع Treasury of Scripture Knowledge في ಕನ್ನಡ IRV.
¶ ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.
‹ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು”› ಎಂದು ಹೇಳಿದನು.
¶ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,
ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.
ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.
ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು,
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.