TSK

TSK · ಅಪೊಸ್ತಲರ ಕೃತ್ಯಗ 3:16

مراجع Treasury of Scripture Knowledge في ಕನ್ನಡ IRV.

العودة إلى المقطع

ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.

ಆತನು, ‹“ಬಾ”› ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.

ಅದಕ್ಕೆ ಯೇಸು, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.›

¶ ‹“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;›

‹ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?›

ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,

ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,

ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.

ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;

ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.