TSK

TSK · ಅಪೊಸ್ತಲರ ಕೃತ್ಯಗ 3:17

مراجع Treasury of Scripture Knowledge في ಕನ್ನಡ IRV.

العودة إلى المقطع

ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು.

ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು,

ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಆಗ ಯೇಸು, ‹“ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು”› ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.

ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.

¶ “ಅವರು ಆರೋನನಿಗೆ, ‘ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು’ ಎಂದು ಕೇಳಿಕೊಂಡರು.

ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.

ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;

ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು.