TSK

TSK · ಅಪೊಸ್ತಲರ ಕೃತ್ಯಗ 5:28

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು.

ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.

ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.

‹ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು”› ಎಂದು ಹೇಳಿದನು.

ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.

ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.

ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.

ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.