ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.
TSK
TSK · ಅಪೊಸ್ತಲರ ಕೃತ್ಯಗ 7:45
مراجع Treasury of Scripture Knowledge في ಕನ್ನಡ IRV.
¶ ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.
ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.
ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.
¶ ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವರ ಮಂಜೂಷಕ್ಕಾಗಿಯೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.
ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.
ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.