TSK

TSK · ಅಪೊಸ್ತಲರ ಕೃತ್ಯಗ 7:49

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.

“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

‹ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.›

ಯೇಸು ಆಕೆಗೆ ‹“ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.›