TSK

TSK · ಅಪೊಸ್ತಲರ ಕೃತ್ಯಗ 7:51

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ

ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು.

ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,

ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.

ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.

ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.

ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.

ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.

ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.

ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.

ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.

‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.

¶ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.

ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.

¶ “ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?

¶ “ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.

ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.