TSK

TSK · ಅಪೊಸ್ತಲರ ಕೃತ್ಯಗ 7:53

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.

ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.

‹ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?”› ಎಂದು ಕೇಳಿದನು.

ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?

ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.