ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.
TSK
TSK · ಅಪೊಸ್ತಲರ ಕೃತ್ಯಗ 8:2
مراجع Treasury of Scripture Knowledge في ಕನ್ನಡ IRV.
¶ ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.
ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.
¶ ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.
ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.
ಸತ್ತವನಿಗಾಗಿ ಅಳಬೇಡಿರಿ, ಗೋಳಾಡಬೇಡಿರಿ; ಸೆರೆಯಾದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂಮಿಯನ್ನು ನೋಡನು.
ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.
ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು.
ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.