ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು.
TSK
TSK · ಅಪೊಸ್ತಲರ ಕೃತ್ಯಗ 8:25
مراجع Treasury of Scripture Knowledge في ಕನ್ನಡ IRV.
‹ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ”› ಅಂದನು.
¶ ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.
ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
¶ “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.
¶ ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.