¶ ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ
TSK
TSK · ಅಪೊಸ್ತಲರ ಕೃತ್ಯಗ 8:40
مراجع Treasury of Scripture Knowledge في ಕನ್ನಡ IRV.
¶ ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
¶ ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.
ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.
ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.
ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.
ಫೆಸ್ತನು ಅವರಿಗೆ; ಪೌಲನು ಕೈಸರೈಯದಲ್ಲಿ ಸೆರೆಮನೆಯೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ.
¶ ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.