ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.
TSK
TSK · ಅಪೊಸ್ತಲರ ಕೃತ್ಯಗ 9:15
مراجع Treasury of Scripture Knowledge في ಕನ್ನಡ IRV.
ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
‹ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.›
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
ಆದರೆ ಆತನು; ‹‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’”› ಹೇಳಿದನು.
‹ನಾನು ನಿನ್ನ ಸ್ವಂತ ಜನರಿಂದಲೂ, ಅನ್ಯಜನರಿಂದಲೂ ನಿನ್ನನ್ನು ರಕ್ಷಿಸುವೆನು.›
‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.
ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.
ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
ಆದರೂ ಪ್ರಿಯರೇ, ನಿಮ್ಮನ್ನು ನೆನಪಿಸುವುದಕ್ಕಾಗಿ ಕೆಲವೊಂದು ವಿಷಯಗಳನ್ನು ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕೆಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವುದಕ್ಕೆ ನನಗೆ ದೇವರ ಆಶೀರ್ವಾದವಾಯಿತು. ನಾನು ದೇವರ ಸುವಾರ್ತಾ ಸೇವೆಯನ್ನು ಯಾಜಕ ಸೇವೆ ಎಂಬಂತೆ ನಡಿಸಿ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ಸಮರ್ಪಕವಾಗುವಂತೆ ಯತ್ನಿಸುವವನಾಗಿದ್ದೇನೆ.
¶ ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ
ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.
ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.
¶ ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು.
¶ ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.
ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”