TSK

TSK · ಅಪೊಸ್ತಲರ ಕೃತ್ಯಗ 9:27

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.

¶ ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.

ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.

ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.

ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.

ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.

ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.

ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.

ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.