TSK

TSK · ಅಪೊಸ್ತಲರ ಕೃತ್ಯಗ 9:32

مراجع Treasury of Scripture Knowledge في ಕನ್ನಡ IRV.

العودة إلى المقطع

ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.

ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;

¶ ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.

ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.

ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.

¶ ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,