TSK

TSK · ಅಪೊಸ್ತಲರ ಕೃತ್ಯಗ 9:34

مراجع Treasury of Scripture Knowledge في ಕನ್ನಡ IRV.

العودة إلى المقطع

‹ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು”› ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, ‹“ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು”› ಅಂದನು.

ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.

ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.

ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.