TSK

TSK · ಅಪೊಸ್ತಲರ ಕೃತ್ಯಗ 9:39

مراجع Treasury of Scripture Knowledge في ಕನ್ನಡ IRV.

العودة إلى المقطع

ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ, ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ, ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ?

ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.

‹ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. ›

‹ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.›

‹ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ”› ಎಂದನು.

¶ ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.

¶ ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.

ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‹‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’› ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.

ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.

¶ ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.

ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.