ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
TSK
TSK · ಆಮೋಸ 2:10
مراجع Treasury of Scripture Knowledge في ಕನ್ನಡ IRV.
“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’
ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.
ಆಗ ನಾನು, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಅಮೋರಿಯರ ಬೆಟ್ಟದ ಸೀಮೆಯ ಹತ್ತಿರಕ್ಕೆ ಬಂದಿದ್ದೀರಿ.
ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.
ನೀವು ಬಹು ಕಾಲದವರೆಗೆ ಅರಣ್ಯದಲ್ಲಿದ್ದ ನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರೆತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ಸಂಹರಿಸಿದೆನು.
ನಲ್ವತ್ತು ವರ್ಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದೆ. ಅವರಿಗೆ ಯಾವ ಕೊರತೆಯೂ ಆಗಲಿಲ್ಲ. ಅವರ ಬಟ್ಟೆಗಳು ಹರಿದುಹೋಗಲಿಲ್ಲ, ಅವರ ಕಾಲುಗಳು ನೋವಿನಿಂದ ಊದಿಕೊಳ್ಳಲಿಲ್ಲ.
ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು
‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.
ಆಗ ನಾನು ಅವರನ್ನು ಐಗುಪ್ತ ದೇಶದೊಳಗಿಂದ ಬಿಡಿಸಿ, ಅರಣ್ಯಕ್ಕೆ ಕರೆದು ತರಲು,
¶ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ?
ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;