TSK

TSK · ಆಮೋಸ 2:11

مراجع Treasury of Scripture Knowledge في ಕನ್ನಡ IRV.

العودة إلى المقطع

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,

ಆದುದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥಗಳನ್ನು ಊಟಮಾಡದಿರು.

ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.

¶ ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,

ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.

¶ ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.

ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.

¶ ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.

¶ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.

ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.

ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?

¶ ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.

ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.

ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.

‹ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,›

ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.

¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ.