TSK

TSK · ಆಮೋಸ 3:10

مراجع Treasury of Scripture Knowledge في ಕನ್ನಡ IRV.

العودة إلى المقطع

ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ.

ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.

¶ ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.

ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;

¶ ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.

ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ.

ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ?

ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.

ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.